ಅಕ್ಟೋಬರ್ 2 2016 ರಂದು ನಡೆದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಎಸ್ ಜೆ ಜಿ ಶಿಕ್ಷಣ ಮಹಾವಿದ್ಯಾಲಯ, ಮುರುಘಾಮಠ, ಆನಂದಪುರಂದಲ್ಲಿ ಆಚರಿಸಲಾಯಿತು. ರಾಷ್ಟ್ರೀಯ ಹೆದ್ದಾರಿ 206 ನ ಪಕ್ಕದಲ್ಲಿ ಬೆಳೆದ ಗಿಡಗಂಟೆಗಳನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್ ಎನ್ ಕರುಣಾಕರ್, ಕಛೇರಿ ಅಧೀಕ್ಷಕರಾದ ರಾಜೇಂದ್ರ ಜಿ. ಪಿ, ಕಾಲೇಜಿನ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು, ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.