ದಿನಾಂಕ 29-12-2017 ರಂದು ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಜೂಡೋ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ಎಸ್ ಜೆ ಜಿ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಕಾಲೇಜಿನ ಸಚ್ಚಿದಾನಂದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ಡಾ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮುರುಘಾಮಠ ಆನಂಪದುರ ಇವರು ಭಾಗವಹಿಸಿದ್ದರು. ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಹುಮಾನವನ್ನು, ಶಿರಾಳಕೊಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಬಹುಮಾನವನ್ನು, ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ತಂಡ ತೃತೀಯ ಬಹುಮಾನವನ್ನು ಪಡೆದುಕೊಂಡವು. ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶಕರಾದ ಡಾ ಪ್ರಕಾಶ್ ರವರು ಮತ್ತು ನಾಗರಾಜ್ ಸರ್ ಪಂದ್ಯದ ರೆಫ್ರಿಯಾಗಿ ಡಾ ಸಂಜೀವ ಪಾಟೀಲ್ ಮತ್ತು ಪ್ರಾಂಶುಪಾಲರಾದ ಡಾ.ಕರುಣಾಕರ್ ಎನ್ ಎನ್ ರವರು ಭಾಗವಹಿಸಿದ್ದರು.